ಕೊಳ್ಳೇಗಾಲ. ಪಟ್ಟಣದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ನೋಟು ಬುಕ್ ಗಳನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಇಂದು ವಿತರಣೆ ಮಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 70 ಬಾಲಕರು ಹಾಗೂ 50 ಬಾಲಕಿಯರಿಗೆ ಟ್ರಾಕ್ ಶೂಟ್, ಟೀ ಶರ್ಟ್, ನೋಟು ಬುಕ್ ವಿತರಿಸಿ ಮಾತನಾಡಿ, ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಅನೇಕ ಸೌಲಭ್ಯಗಳನ್ನು ಜಾರಿಗೆ ತಂದಿದೆ. ಇದರ ಪ್ರಯೋಜನವನ್ನು ಮಕ್ಕಳು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಉತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮುವ ಮೂಲಕ ಉನ್ನತ ಹುದ್ದೆಯನ್ನು ಅಲಂಕರಿಸುವ ಗುರಿ ಹೊಂದಬೇಕು ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ನಗರಸಭೆ ಅಧ್ಯಕ್ಷರು ರೇಖಾ, ಸದಸ್ಯರು ಸುಮಾಸುಬ್ಬಣ್ಣ, ಶಾಂತರಾಜು, ಡಿವೈಎಸ್ಪಿ ಧರ್ಮೇಂದ್ರ, ಸರ್ಕಲ್ ಇನ್ಸ್‌ಪೆಕ್ಟರ್ ಶಿವಮಾದಯ್ಯ, ಪಿಎಸ್ಐ ಉಮಾವತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರ ವಿಶ್ವನಾಥ್ ಎನ್, ತಾಲ್ಲೂಕು ಅಧಿಕಾರಿ ಶಿವರಾಜು, ಎಂ, ನಿಲಯ ಮೇಲ್ವಿಚಾರಕರು ಲೋಹಿತ್.ಆರ್, ನೇತ್ರಕಲಾ, ಪ್ರವೀಣ್ ಕುಮಾರ್ ಇತರರು ಇದ್ದರು.